×
Ad

ಸಾವಳಸಂಗ ಗ್ರಾಮದಲ್ಲಿ ವೀರಯೋಧ ಸಹದೇವ ಮೋರೆ ಅಂತ್ಯ ಕ್ರಿಯೆ

Update: 2016-02-15 14:41 IST

ವಿಜಯಪುರ, ಫೆ.15:  ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ವೀರಯೋಧ ಸಹದೇವ ಮಾರುತಿ ಮೋರೆ ಅವರ ಮೃತದೇಹದ ಅಂತ್ಯಕ್ರಿಯೆ ಇಂದು ಬೆಳಗ್ಗೆ ಸಕಲ ಸರಕಾರಿ  ಗೌರವಗಳೊಂದಿಗೆ ನೆರವೇರಿಸಲಾಯಿತು.
 ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ಹೊರವಲಯದಲ್ಲಿರುವ ಅವರ ಸ್ವಂತ ಜಮೀನಿನಲ್ಲೇ ವೀರಯೋಧನ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಪಾಟೀಲ್, ಜಿಲ್ಲಾಧಿಕಾರಿ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ವೀರಯೋಧ ಸಹದೇವ ಮಾರುತಿ ಮೋರೆ ಅವರ ಪಾರ್ಥಿವ ಶರೀರಕ್ಕೆ ತಂದೆ ಮಾರುತಿ ಮೋರೆ ಅಗ್ನಿಸ್ಪರ್ಶ ಮಾಡಿದರು.ಸಹದೇವ
ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸಹದೇವ ಮಾರುತಿ ಮೋರೆ ಅವರು ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News