ಮುಲ್ಕಿ : ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಲ್ಕಿ, ಫೆ.15: ಮುಲ್ಕಿ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಭಿರ ಮುಲ್ಕಿ ಬಂಟರ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಸಂಘಟನೆಗಳು ಆಯೊಜಿಸುವ ಶಿಬಿರಗಳಲ್ಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳಿಗೆ ಹೆಚ್ಚುವರಿ ಚಿಕಿತ್ಸೆಬೇಕಾದಲ್ಲಿ ಆಸ್ಪತ್ರೆಯ ವಿವಿಧ ತಜ್ಞ ವೈದ್ಯತ ತಂಡ ವಿಶೇಷ ದರಕಡಿತದ ಸೌಭ್ಯಗಳೊಂದಿಗೆ ಉತ್ತಮ ಚಿಕಿತ್ಸೆ, ಉಚಿತ ಹೆರಿಗೆ ಹಾಗೂ ವಿಮೆಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ವಿಭಾಗದ ಸಹಾಯಕ ಅಧಿಕಾರಿ ಉದಯ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿ ವೈಧ್ಯಾಧಿಕಾರಿ ಡಾ.ಅಂಕುರ್, ಮು ಲ್ಕಿ ಬಂಟರ ಸಂಘದ ಪೂರ್ವಾಧ್ಯಕ್ಷ ಮುರಳೀಧರ ಭಂಡಾರಿ, ಕಿನ್ನಿಗೋಳಿ ಬಂಟರ ಸಂಘದ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಮುಂಬೈ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸಹನಾ ಶೆಟ್ಟಿ, ಮುಲ್ಕಿ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಬಬಿತಾ ಶೆಟ್ಟಿ ಅತಿಥಿಗಳಾಗಿದ್ದರು.