ಸುಳ್ಯ : ಬದನಾಜೆ ನಿವಾಸಿಗಳಿಂದ ಮತದಾನ ಬಹಿಷ್ಕಾರ
Update: 2016-02-15 17:10 IST
ಸುಳ್ಯ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಉಬರಡ್ಕ ಗ್ರಾಮದ ಬದನಕಜೆ ಎಂಬಲ್ಲಿರುವ ಮೂಲ ಮಲೆಕುಡಿಯ ನಿವಾಸಿಗಳು ಮತದಾನ ಬಹಿಷ್ಕರಿಸುವ ಮತ್ತು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
20ರಂದು ನಡೆಯುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವ ಹಾಗೂ ಫೆ.17ರಂದು ಸೂಂತೋಡಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಬದನಕಜೆ ನಿವಾಸಿಗಳು ತಿಳಿಸಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳಿಗೂ ಅವರು ಮನವಿ ಮಾಡಿದ್ದಾರೆ.