×
Ad

ಸುಳ್ಯ : ನೇಣು ಬಿಗಿದು ಆತ್ಮಹತ್ಯೆ

Update: 2016-02-15 17:22 IST

ಸುಳ್ಯ: ಸುಳ್ಯದ ಕುರುಂಜಿಭಾಗ್ ನಿವಾಸಿ ರಾಜೇಶ್ ಯಾನೆ ರಾಮಚಂದ್ರ ಎಂಬವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಿವಾಹಿತರಾದ ಇವರಿಗೆ 35 ವರ್ಷ ವಯಸ್ಸಾಗಿತ್ತು. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News