ಕಾರ್ಕಳ : ಸೇವಾ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
Update: 2016-02-15 18:38 IST
ಕಾರ್ಕಳ ಉಡುಪಿ ಜಿಲ್ಲಾಡಳಿತದ ವತಿಯಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಉಡುಪಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಿರಂಜನ್ ಭಟ್ ಅವರಿಗೆ ಅಭಿನಂದನೆ ಕಾರ್ಯಕ್ರಮ ಆಶಾ ನಿಲಯ ವಿಶೇಷ ಶಾಲೆಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ ಶಿಕ್ಷಕೇತರರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷೆ ಕಾಂತಿಹರೀಶ್ ಹಾಗೂ ರಾಜ್ಯಾಧ್ಯಕ್ಷೆ ಆಗ್ನೇಸ್ ಕುಂದರ್ ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾಂತಿ ಹರೀಶ್ ಸ್ವಾಗತಿಸಿದರು. ರವೀಂದ್ರ ಹೆಚ್. ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ರಮೇಶ್ ನಾಯ್ಕಾ ವಂದಿಸಿದರು.