×
Ad

ಸಮಾಜದಲ್ಲಿ ಛಾಯಾಗ್ರಾಹಕರ ಪಾತ್ರ ಅಪಾರ

Update: 2016-02-15 23:40 IST


 ಉಳ್ಳಾಲ, ಫೆ.15: ಸಮಾಜದಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದ್ದು, ಸಂಘಟಿತರಾಗಿ ಕಾರ್ಯನಿರ್ವಹಿಸಿದಾಗ ಉತ್ತಮ ಸಾಮಾಜಿಕ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ಜಿಪಂ ಉಪಾಧ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯಪಟ್ಟರು.
ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದ ಸೌತ್ ಕೆನರಾ ಫೋಟೊಗ್ರಾಫರ್ಸ್‌ ಅಸೋಸಿಯೇಶನ್ ಉಳ್ಳಾಲ ವಲಯದ 2016-17ನೆ ಸಾಲಿನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿಯ ಪದಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

 ಎಸ್‌ಕೆಪಿಎ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಜಗನ್ನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಕೆಪಿಎ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷ ವಾಸುದೇವರಾವ್, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೃಷ್ಣಪ್ಪಸಾಲ್ಯಾನ್, ಎಸ್‌ಕೆಪಿಎ ಪ್ರಧಾನ ಕಾರ್ಯದರ್ಶಿ ಮಧು ಮಂಗಳೂರು, ಕೆಪಿಸಿಸಿ ಕಾರ್ಮಿಕ ವಿಭಾಗ ಉಪಾಧ್ಯಕ್ಷ ಕೆ.ಎಸ್. ಅಮೀರ್ ಅಹ್ಮದ್ ತುಂಬೆ ಉಪಸ್ಥಿತರಿದ್ದರು. ಈ ಸಂದರ್ಭ ಫೋಟೊಗ್ರಫಿಯಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ರಾಕೇಶ್ ಕೊಣಾಜೆ, ಅಪುಲ್ ಇರಾ, ಕಲಾವಿದ ಪ್ರವೀಣ್ ಮರ್ಕಮೆ, ಅರುಣ್ ಉಳ್ಳಾಲ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಮಾರ್ಲರನ್ನು ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಠಲ ಎ., ಉಳ್ಳಾಲ ನಗರಸಭಾ ಸದಸ್ಯ ಕೆ. ಹುಸೈನ್ ಕುಂಞಿಮೋನು, ಕ್ಲಿಕ್ ಕ್ಯಾಟರಿಂಗ್‌ನ ಮಾಲಕ ಚಂದ್ರಕಾಂತ್ ತೊಕ್ಕೊಟ್ಟು, ಆಡಂಕುದ್ರು ಸೈಂಟ್ ಸೆಬಾಸ್ಟಿಯನ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಿನಿವಾ ಪಿಂಟೋ, ಅಥ್ಲೆಟಿಕ್ ಪಟು ಅಬ್ದುರ್ರಹ್ಮಾನ್‌ರನ್ನು ಸನ್ಮಾನಿಸಲಾಯಿತು. ಅಧ್ಯಕ್ಷ ಯು. ಅರುಣ್ ಕುಮಾರ್, ಕೋಶಾಧಿಕಾರಿ ತೀರ್ಥನಾಥ್ ಕಣಂತೂರು, ನಿಯೋಜಿತ ಅಧ್ಯಕ್ಷ ಉಮೇಶ್ ಉಳ್ಳಾಲ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಮಾರ್ಲ ಸ್ವಾಗತಿಸಿದರು. ಹರೀಶ್ ಕೊಣಾಜೆ ಪ್ರಾಸ್ತಾವಿಸಿದರು. ತನುಂಜಯ ರಾವ್ ವಂದಿಸಿದರು. ಹೇಮಚಂದ್ರ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News