×
Ad

ಐಸಿಸಿಯಿಂದ ಯಾವುದೇ ಒತ್ತಡವಿಲ್ಲ: ಪಿಸಿಬಿ

Update: 2016-02-15 23:56 IST

ಕರಾಚಿ, ಫೆ.15: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕ್ ತಂಡವನ್ನು ಕಳುಹಿಸಿಕೊಡಲು ಐಸಿಸಿ ನಮ್ಮ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದು ಹೇಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಭಾರತಕ್ಕೆ ತೆರಳಲು ಸರಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದೆ.

ಈ ತನಕ ಐಸಿಸಿಯಿಂದ ನಮಗೆ ಯಾವುದೇ ಒತ್ತಡ ಬಂದಿಲ್ಲ. ಇತ್ತೀಚೆಗೆ ನಡೆದ ಐಸಿಸಿ ಸಭೆಯಲ್ಲಿ ಭಾರತದಲ್ಲಿ ಪಾಕಿಸ್ತಾನದ ಆಟಗಾರರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿತ್ತು ಎಂದು ಪಿಸಿಬಿಯ ಉನ್ನತಾಧಿಕಾರಿಗಳು ಹೇಳಿದ್ದಾರೆ.

ಟೂರ್ನಿಯಿಂದ ಹಿಂದೆ ಸರಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿತ್ತು.

ಟ್ವೆಂಟಿ-20 ವಿಶ್ವಕಪ್‌ಗೆ ಪಾಕ್ ತಂಡವನ್ನು ಕಳುಹಿಸಿಕೊಡಲು ನಮ್ಮ ಸರಕಾರದಿಂದ ಯಾವುದೇ ಸೂಚನೆಯಾಗಲಿ, ನಿರ್ದೇಶನವಾಗಲಿ ಬಂದಿಲ್ಲ. ನಾವು ಸರಕಾರದ ಉತ್ತರಕ್ಕಾಗಿ ಕಾಯುತ್ತಿದ್ದೇವೆ ಎಂದು ಪಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News