ಸೇವಾ ಭದ್ರತೆಗೆ ವಿಶೇಷ ನಿಯಮಾವಳಿ ರಚಿಸಲು ಅತಿಥಿ ಉಪನ್ಯಾಸಕರ ಆಗ್ರಹ
ಬೆಂಗಳೂರು, ಫೆ. 15: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ‘ವಿಶೇಷ ನಿಯಮಾವಳಿ ರಚನೆ’ ಸೇರಿದಂತೆ ಇತರೆ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ನಡೆಸಿದರು.ಸೋಮವಾರ ನಗರದ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನಾ ರ್ಯಾಲಿಯನ್ನು ನಡೆಸುವ ಮೂಲಕ ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.ರ್ನಾಟಕದ 411 ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 14,531 ಅತಿಥಿ ಉಪನ್ಯಾಸಕರು ಈಗಾಗಲೇ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ತರಗತಿ ಬಹಿಷ್ಕಾರ ಸೇರಿ ಮತ್ತಿತರ ಪ್ರತಿಭಟನೆಯಲ್ಲಿ ತೊಡಗಿದ್ದರೂ ಸರಕಾರ ಯಾವುದೇ ಕ್ರಮಕ್ಕೆ ಮುಂದಾಗದೆ ಸುಮ್ಮನಿರುವುದು ಖಂಡನೀಯ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಎನ್.ಶ್ರೀನಿವಾಸಾಚಾರ್ ಕಿಡಿಕಾರಿದರು.ತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ರಾಜ್ಯ ಸರಕಾರ ಚರ್ಚಿಸಲು ಮುಂದಾಗಬೇಕು ಎಂದ ಅವರು, ಹೋರಾಟನಿರತ ಅತಿಥಿ ಉಪನ್ಯಾಸಕರ ಬದಲಾಗಿ ಪರ್ಯಾಯವಾಗಿ ಪದವಿ ತರಗತಿಗಳನ್ನು ನಡೆಸಲು ಹೊಸದಾಗಿ ಉಪನ್ಯಾಸಕರ ನೇಮಕಕ್ಕೆ ಅಧಿಕಾರಿಗಳ ಮೂಲಕ ನಡೆಸಿರುವ ಆದೇಶವನ್ನು ಸರಕಾರ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.ತಿಥಿ ಉಪನ್ಯಾಸಕರ ವಿಲೀನ ಪ್ರಕ್ರಿಯೆ ಆಗುವವರೆಗೂ ಮಾಸಿಕ ವೇತನ 25 ಸಾವಿರ ರೂ.ನಿಗದಿಗೊಳಿಸಿ ವರ್ಷ ಪೂರ್ತಿ ವೇತನ ಕಡ್ಡಾಯಗೊಳಿಸಬೇಕು. ಅದೇ ರೀತಿ, ಶಿಕ್ಷಣ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಪಟ್ಟು ಹಿಡಿದರು.
ಪ್ರತಿಭಟನೆಯಲ್ಲಿ ಡಿವೈಎಫ್‌ಐನ ಕಾರ್ಯ ದರ್ಶಿ ಬಿ.ರಾಜಶೇಖರಮೂರ್ತಿ, ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ.ಮಾನ್ಪಡೆ ಸೇರಿ ಪ್ರಮುಖರು ಉಪಸ್ಥಿತರಿದ್ದರು.