×
Ad

ಗ್ರಾಮೀಣಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

Update: 2016-02-16 23:21 IST


 ಮೂಡುಬಿದಿರೆ, ಫೆ.16: ಇಲ್ಲಿನ ಶ್ರೀ ಮಹಾವೀರ ಕಾಲೇಜಿನ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಎಂ.ಕೆ ಅನಂತ್ರಾಜ್ ದೈ.ಶಿಕ್ಷಣ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ಜಿ.ವಿ.ಪೈ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ ಆರಂಭಗೊಂಡಿರುವ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್ ಉದ್ಘಾಟಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ, ಪದವಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ದೀಕ್ಷಿತ್, ಪ.ಪೂ. ಕಾಲೇಜಿನ ಪ್ರಾಂಶುಪಾಲ ರಮೇಶ್ ಶೆಟ್ಟಿ, ಎಂ.ಕೆ. ಅನಂತ್ರಾಜ್ ದೈ.ಶಿ. ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್, ದೈ.ಶಿ.ಕಾಲೇಜಿನ ನಿರ್ದೇಶಕ ರಾಜ್‌ಪ್ರಸಾದ್, ಕ್ರೀಡಾ ಕಾರ್ಯದರ್ಶಿ ಪ್ರೀತಮ್‌ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ನೀಲ್ ಕೆನೆತ್ ವಾಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವಾತಿ ಪರಾಡ್ಕರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News