ಸ್ವಹಿತಾಸಕ್ತಿ ಸಂಘರ್ಷ ಎದುರಿಸುತ್ತಿರುವ ಗಂಗುಲಿ
Update: 2016-02-16 23:29 IST
ಮುಂಬೈ, ಫೆ.16: ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಹಲವು ಲಾಭದಾಯಕ ಹುದ್ದೆಗಳನ್ನು ಹೊಂದುವ ಮೂಲಕ ಸ್ವಹಿತಾಸಕ್ತಿ ಸಂಘರ್ಷವನ್ನು ಎದುರಿಸುತ್ತಿದ್ದಾರೆ.
ಪ್ರಸ್ತುತ ಐಪಿಎಲ್‌ನ ಆಡಳಿತ ಮಂಡಳಿಯ ಸದಸ್ಯರಾಗಿರುವ ಗಂಗುಲಿ ಐಪಿಎಲ್‌ನ ಪುಣೆ ಫ್ರಾಂಚೈಸಿ ಮಾಲಕರೊಂದಿಗೆ ಪಾಲುದಾರರಾಗಿದ್ದಾರೆ. ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಗಂಗುಲಿ ಇಂಡಿಯನ್ ಸೂಪರ್ ಫುಟ್ಬಾಲ್ ಲೀಗ್(ಐಎಸ್‌ಎಲ್)ನಲ್ಲಿ ಅಟ್ಲೆಟಿಕೊ ಡಿಕೋಲ್ಕತಾ ತಂಡದ ಸಹ ಮಾಲಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗಂಗುಲಿ ವಿರುದ್ಧ ಒಂಬಡ್ಸ್‌ಮನ್‌ನಲ್ಲಿ ಸ್ವಹಿತಾಸಕ್ತಿ ಸಂಘರ್ಷ ಪ್ರಕರಣ ದಾಖಲಾಗಿದೆ.
ಪ್ರಕರಣದ ಬಗ್ಗೆ ಒಂಬಡ್ಸ್‌ಮನ್‌ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ, ಸೌರವ್ ಗಂಗುಲಿ ಸಿಎಬಿ ಅಧ್ಯಕ್ಷರಾಗಿದ್ದು, ಐಪಿಎಲ್ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ. ಆದರೆ, ಅವರಿಗೆ ವ್ಯಾವಹಾರಿಕ ನಂಟಿರುವ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದೆ.