ಫೆ.28ಕ್ಕೆ ಪೊಲೀಸ್ ನೇಮಕಾತಿ ಪರೀಕ್ಷೆ
Update: 2016-02-16 23:47 IST
ಬೆಂಗಳೂರು, ಫೆ.16: ವಿಶೇಷ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (ಕೆಎಸ್‌ಆರ್‌ಪಿ) ನೇಮಕಾತಿಯ ಲಿಖಿತ ಪರೀಕ್ಷೆಯು ಫೆ.28 ರಂದು ರಾಜ್ಯದ 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಕೆಎಸ್‌ಆರ್‌ಪಿ ಪುರುಷ ಮತ್ತು ಮಹಿಳಾ ನೇಮಕಾತಿಯ ಪರೀಕ್ಷೆಯು ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಾವಣಗೆರೆ ಹಾಗೂ ಕಲಬುರಗಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ಕರೆ ಪತ್ರಗಳನ್ನು ಈಗಾಗಲೇ ಇಲಾಖೆಯ ಅಧಿಕೃತ ವೆಬ್‌ಸೈಟ್ ಡಿಡಿಡಿ..ಜಟ.ಜ್ಞಿನಲ್ಲಿ ಅಪ್‌ಲೋಡ್ ಮಾಡಲಾಗಿದೆ.