ಫೆ.21: ಪಲ್ಸ್ ಪೋಲಿಯೊ

Update: 2016-02-18 18:44 GMT

ಉಡುಪಿ, ಫೆ.18: ಜಿಲ್ಲೆಯಲ್ಲಿ 2ನೆ ಹಂತದ ಪಲ್ಸ್ ಪೋಲಿಯೊ ಕಾರ್ಯಕ್ರಮ ಫೆ.21ರಂದು ನಡೆಯಲಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 644 ಲಸಿಕಾ ಕೇಂದ್ರ, 22 ಮೊಬೈಲ್ ಟೀಮ್ ಹಾಗೂ 30 ಟ್ರಾನ್ಸಿಟ್ ಬೂತ್‌ಗಳನ್ನು ತೆರೆದು 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು. ಕಾರ್ಯಕ್ರಮದಲ್ಲಿ 2,720 ಸ್ವಯಂಸೇವಕರು ಮತ್ತು 131 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಪೋಲಿಯೊ ಲಸಿಕೆ ನೀಡಲು 0-5 ವರ್ಷದೊಳಗಿನ 87,776 ಮಕ್ಕಳನ್ನು ಗುರುತಿಸಲಾಗಿದೆ.

 ಗ್ರಾಮಾಂತರ ಪ್ರದೇಶದಲ್ಲಿ ಫೆ.22, 23 ಹಾಗೂ ನಗರ ಪ್ರದೇಶದಲ್ಲಿ ಫೆ.22ರಿಂದ 24ರವರೆಗೆ ಸ್ವಯಂಸೇವಕರು ಮನೆ ಮನೆ ಭೇಟಿ ನೀಡಿ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಹನಿ ಹಾಕಿಸಿದ ಬಗ್ಗೆ ಖಚಿತಪಡಿಸಿಕೊಳ್ಳುತ್ತಾರೆ. ಫೆ.21ರಂದು ಬೆಳಗ್ಗೆ 8 ಗಂಟೆಗೆ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದರ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News