×
Ad

ಮಂಗಳೂರು: ಗಡಿನಾಡು ಕನ್ನಡಿಗರ ಸಮಸ್ಯೆ ಪರಿಹಾರಕ್ಕಾಗಿ ಕಸಾಪದಿಂದ ಸಾಹಿತ್ಯ ಚಳವಳಿ

Update: 2016-02-19 19:13 IST

ಮಂಗಳೂರು,ಫೆ.19: ಫೆ.28 ರಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಗೆ ನಡೆಯುವ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಕಸಾಪ ಮತದಾರರು ಚುನಾಯಿಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡಲ್ಲಿ ಗಡಿನಾಡು ಕನ್ನಡಿಗರ ಸಮಸ್ಯೆ ಪರಿಹಾರಕ್ಕಾಗಿ ಕಸಾಪದಿಂದ ಸಾಹಿತ್ಯ ಚಳವಳಿಯ ಜೊತೆಗೆ ಹೋರಾಟದ ಚಳವಳಿಯ ನಾಯಕತ್ವವನ್ನು ತೆಗೆದುಕೊಳ್ಳಲಾಗುವುದು ಎಂದು ಕಸಾಪ ರಾಜ್ಯಧ್ಯಕ್ಷ ಸ್ಥಾನ ಅಭ್ಯರ್ಥಿ ಪ್ರೊ.ಬಿ.ಜಯಪ್ರಕಾಶ್ ಗೌಡ ಹೇಳಿದರು.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 189750 ಮತದಾರರಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3250 ಉಡುಪಿ ಜಿಲ್ಲೆಯಲ್ಲಿ 1100 ಮತ್ತು ಕಾಸರಗೋಡು ಜಿಲ್ಲೆಯಲ್ಲಿ 500 ಮತದಾರರಿದ್ದಾರೆ. ಈವರೆಗೆ ನಡೆದ ಚುನಾವಣೆಯಲ್ಲಿ ಶೇಕಡ 50 ಕ್ಕೂ ಹೆಚ್ಚು ಮತ ಚಲಾವಣೆಗೊಂಡಿಲ್ಲ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾವಣೆ ಮಾಡುವ ಮೂಲಕ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ರಾಜ್ಯಾಧ್ಯಕ್ಷನಾಗಿ ಚುನಾಯಿತನಾದರೆ ಕಸಾಪ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಅತ್ಯಂತ ಕ್ರೀಯಾಶೀಲವಾಗಿರುವಂತೆ ವ್ಯವಸ್ಥೆಗೊಳಿಸಲಾಗುವುದು, ಶತಮಾನೋತ್ಸವ ಸಂದರ್ಭದಲ್ಲಿ ಕಸಾಪ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಸರ್ಕಾರದಿಂದಲೆ ನೇರವಾಗಿ ನಿವೇಶನ ಹಾಗೂ ಧನಸಹಾಯ ಮಂಜೂರಾಗುವಂತೆ ಪ್ರಯತ್ನಿಸುವುದು ,ಕನಿಷ್ಠ ವರ್ಷಕ್ಕೆ ಹತ್ತು ವೌಲಿಕ ಪುಸ್ತಕಗಳನ್ನು ಪ್ರಕಟಿಸುವುದು ಸೇರಿದಂತೆ ವಿವಿಧ ಕಾರ್ಯಗಳನ್ನು ಮಾಡಲಾಗುವುದು ಎಂದು ಹೇಳಿದರು.

 ಪತ್ರಿಕಾಗೋಷ್ಠಿಯಲ್ಲಿ ಸೋಮಶೇಖರ್ ,ರಾಮೇಗೌಡ, ಮಹೇಶ್ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News