×
Ad

ಕಾರ್ಕಳ: ಮೊಬೈಲ್ ಅಪ್ಲಿಕೇಶನ್ ಡೆವಲಪ್‌ಮೆಂಟ್ ಕಾರ್ಯಾಗಾರ

Update: 2016-02-19 23:46 IST

ಕಾರ್ಕಳ, ಫೆ.19: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ಸ್ಟೂಡೆಂಡ್ ಚಾಪ್ಟರ್ ವಿಭಾಗದಿಂದ ಮೊಬೈಲ್ ಅಪ್ಲಿಕೇಶನ್ ಡೆವಲಪ್‌ಮೆಂಟ್ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ನಿಟ್ಟೆ ತಾಂತ್ರಿಕ ಮಹಾವಿದ್ಯಾನಿಲಯದ ಇನ್‌ಫಾರ್ಮೇಶನ್ ಸೈನ್ಸ್ ವಿಭಾಗದ ಪ್ರೊ. ಅಶ್ವಿನಿ ಬಿ. ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಪ್ರೊ.ವೇಣುಗೋಪಾಲ್ ಪಿ.ಎಸ್., ಪ್ರೊ. ರೋಶನ್ ಫೆರ್ನಾಂಡಿಸ್ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾನಿಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್, ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಹಾಗು ಟಿಇಕ್ಯುಐಪಿ ನಿಟ್ಟೆ ಘಟಕದ ಮಾರ್ಗದರ್ಶನದಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News