ನೆಕ್ಕಿಲಾಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು
Update: 2016-02-19 23:56 IST
ಉಪ್ಪಿನಂಗಡಿ, ಫೆ.19: ಅಪಸ್ಮಾರ ಕಾಯಿಲೆಯ ವ್ಯಕ್ತಿಯೋರ್ವ ಕುಸಿದು ಬಿದ್ದು ಗಾಯಗೊಂಡ ಪರಿಣಾಮ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ನಿವಾಸಿ ಸುಂದರ (40) ಮೃತಪಟ್ಟ ವ್ಯಕ್ತಿ. ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಶುಕ್ರವಾರ ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬ್ಟರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.