ಉಡುಪಿ: ಎರಡನೆ ಸುತ್ತಿನ ಪಲ್ಸ್ ಪೋಲಿಯೊ ಉದ್ಘಾಟನೆ

Update: 2016-02-21 18:36 GMT

ಉಡುಪಿ, ಫೆ.21: ಜಿಲ್ಲೆಯಲ್ಲಿ ಎರಡನೆ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ರವಿವಾರ ಉಡುಪಿ ಕೆಎಂ ರಸ್ತೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.
 
ಪೋಲಿಯೊ ಲಸಿಕೆ ನೀಡಲು 0-5 ವರ್ಷದೊಳಗಿನ 87,776 ಮಕ್ಕಳನ್ನು ಗುರುತಿಸಲಾಗಿದ್ದು, ಅದಕ್ಕಾಗಿ ಜಿಲ್ಲೆಯಲ್ಲಿ 644 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಮೊದಲನೆ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಗ್ರೇಸಿ ಗೋನ್ವಾಲ್ವಿಸ್, ಜಿಲ್ಲಾ ಸರ್ಜನ್ ಮಹೇಂದ್ರ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯೆ ಡಾ.ಕಿಶೋರಿ, ಮಕ್ಕಳ ತಜ್ಞ ಡಾ.ಅಮರನಾಥ ಶಾಸ್ತ್ರಿ, ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿದರು. ರೋಟರಿ ಅಧ್ಯಕ್ಷ ಡಾ.ಪ್ರಭಾಕರ ಮಲ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News