×
Ad

ಪುತ್ತೂರು: ರೈಲ್ವೇ ಸಂಪರ್ಕ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

Update: 2016-02-22 17:23 IST

ಪುತ್ತೂರು: ಕಳೆದ ಹಲವು ವರ್ಷಗಳಿಂದ ತೀರಾ ನಾದುರಸ್ತಿಯಲ್ಲಿದ್ದ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಂಪರ್ಕ ರಸ್ತೆಯ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ನೈರುತ್ಯ ರೈಲ್ವೇಯ ಇಂಜಿನೀಯರ್ ಗೋಪ ಕುಮಾರ್ ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆಯಲಿ ಸುಮಾರು 150 ಮೀಟರ್ ಉದ್ದ ಹಾಗೂ 5 ಮೀಟರ್ ಅಗಲದಲ್ಲಿ ಕಾಂಕ್ರಿಟ್ ಕಾಮಗಾರಿ ನಡೆಯಲಿದ್ದು ಮುಂದಿನ 45 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಬಾಗ ಮಡಿವಾಳ ಕಟ್ಟೆಯಲ್ಲಿ ಸಾಗಿ ರೈಲ್ವೇ ಸಂಪರ್ಕಿಸುವ ರಸ್ತೆ ಹಾಗೂ ಪುತ್ತೂರು -ಉಪ್ಪಿನಂಗಡಿ ರಸ್ತೆಯಲ್ಲಿನ ಹಾರಾಡಿಯಿಂದ ರೈಲ್ವೇ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ಈ ಪೈಕಿ ಜನರು ಹೆಚ್ಚಾಗಿ ಬಳಕೆ ಮಾಡುವ ಮಡಿವಾಳಕಟ್ಟೆ- ರೈಲು ನಿಲ್ದಾಣ ಸಂಪರ್ಕ ರಸ್ತೆಗೆ ಮೊದಲ ಆದ್ಯತೆ ನೀಡಲಾಗಿದ್ದು ಕಾಂಕ್ರೀಟ್ ಕಾಮಗಾರಿ ಆರಂಭಿಸಲಾಗಿದೆ. ಸೋಮವಾರ ಶಿಲಾನ್ಯಾಸ ಕಾರ್ಯಕ್ರಮದ ಬಳಿಕ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡುವ ಕೆಲಸ ನಡೆಸಲಾಯಿತು.

ನೈರುತ್ಯ ರೈಲ್ವೇಯ ಕಬಕ- ಪುತ್ತೂರು ಸೆಕ್ಷನ್ ಇಂಜಿನೀಯರ್ ನಾಯ್ಡು, ಗುತ್ತಿಗೆದಾರ ಗಿರೀಶ್ ಹೆಬ್ಬಾರ್, ಮೈಸೂರು ವಿಭಾಗೀಯ ರೈಲ್ವೇ ಸಲಹಾ ಸಮಿತಿ ಸದಸ್ಯ ಸುದರ್ಶನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News