ನಮ್ಮ ದೇಶದ ಸಂಪತ್ತು ಇಂದಿನ ವಿದ್ಯಾರ್ಥಿಗಳು: ಪ್ರೊ. ಡಾ. ಎಂ.ಎಸ್. ಮೂಡಿತ್ತಾಯ ಅಭಿಪ್ರಾಯ
ಉಳ್ಳಾಲ. ಫೆ, 22: ನಮ್ಮ ದೇಶದ ಸಂಪತ್ತು ಇಂದಿನ ವಿದ್ಯಾರ್ಥಿಗಳು. ದೇಶದ ಭವಿಷ್ಯವನ್ನು ನಿರ್ಧರಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಹೆಚ್ಚುಇದ್ದು ಇಂತಹ ಜಾಗೃತಿ ಕಾರ್ಯಕ್ರಮ ಮೊದಲು ವಿದ್ಯಾರ್ಥಿಗಳಿಗೆ ನೀಡುದರಿಂದ ಸಮಾಜವನ್ನು ಪರಿವರ್ತನೆ ಸಾಧ್ಯ ಎಂದು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಡಾ. ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ಯೇನೆಪೋಯ ವಿಶ್ವವಿದ್ಯಾಲಯದ ಯೆನ್‌ಡ್ಯೂರೆನ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಮಂಗಳೂರು ವಿವಿಯ ರಾಷ್ಟ್ರಿೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸರ್ವೋ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಜಾಗತೀಕರಣದ ಪ್ರಭಾವದಿಂದ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದ್ದರೂ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಸಾಂಸ್ಕ ೃತಿಕ ಹಾಗೂ ಬಹುಮುಖ್ಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಅಭದ್ರತೆ ಕಾಡುತ್ತಿದೆ. ಸುಭದ್ರ ಸ್ವಾಸ್ಥ ್ಯ ಸಮಾಜಕ್ಕೆ ಆರೋಗ್ಯವೂ ಮುಖ್ಯ. ಆ ನಿಟ್ಟಿನಲ್ಲಿ ಆರೋಗ್ಯದ ಕುರಿತಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಯೇನೆಪೋಯ ಸಮೂಹ ಸಂಸ್ಥೆಗಳ ಅಧ್ಯಕ್ಷ ವೈ. ಮಹಮ್ಮದ್ ಕುಂಞ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ಪರೀಕ್ಷಾಂಗ ಉಪ ಕುಲಸಚಿವ ಪ್ರೊ. ಪ್ರಶಾಂತ್ ನಾಯಕ್, ಯೇನೆಪೋಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ. ಎಂ. ವಿಜಯ್ ಕುಮಾರ್, ಕುಲಸಚಿವ ಡಾ. ಸಿ.ವಿ. ರಘುವೀರ್, ಯೇನೆಪೋಯ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಗುಲಾಂ ಜಿಲಾನಿ ಖಾದಿರಿ, ಮಂಗಳೂರು ಹಾಗೂ ಕಣ್ಣೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಅಬ್ದುಲ್ ರಹಿಮಾನ್, ಯೇನೆಪೋಯ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪದ್ಮಕುಮಾರ್, ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್‌ನ ಕಾರ್ಯದರ್ಶಿ ಡಾ. ಅಖ್ತರ್ ಹುಸೈನ್ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 900ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಆಳ್ವಾಸ್ ಮೂಡುಬಿದಿರೆ ಹಾಗೂ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆದಿತ್ತು. ಯೇನೆಪೋಯ ವೈದ್ಯಕೀಯ ಮಹಾವಿದ್ಯಾಲಯದ ಕಮ್ಯುನಿಟಿ ಮೆಡಿಸಿನ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಪ್ರಚೇತ್ ವಂದಿಸಿದರು. ಇಎನ್‌ಟಿ ಪ್ರೊಫೆಸರ್ ಡಾ. ವಿಜಯಲಕ್ಷಿ ್ಮ ಕಾರ್ಯಕ್ರಮ ನಿರೂಪಿಸಿದರು.