ಮಂಗಳೂರು : ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ:ಯುವಕನ ಬಂಧನ
Update: 2016-02-22 22:21 IST
ಮಂಗಳೂರು,ಫೆ.22: ನಗರದ ಎ.ಆರ್ .ಡಿಸೋಜ ಲೇನ್ ಬಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಜೊತೆ ಅಶ್ಲೀಲವಾಗಿ ವರ್ತಿಸಿದ ಪುತ್ತೂರು ಕಲ್ಲಂದಡ್ಕ ನಿವಾಸಿ ಶಬ್ಬೀರ್ (26) ಎಂಬಾತನನ್ನು ಕದ್ರಿ ಠಾಣಾಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಬ್ಬೀರ್ ಕಾಲೇಜು ವಿದ್ಯಾರ್ಥಿನಿ ಬೆಳಿಗ್ಗೆ ಬೆಂದೂರುವೆಲ್‌ನಲ್ಲಿರುವ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಶ್ಲೀಲವಾಗಿ ವರ್ತಿಸಿದ್ದನು. ಈ ಬಗ್ಗೆ ವಿದ್ಯಾರ್ಥಿನಿ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಕದ್ರಿ ಠಾಣಾ ಪೊಲೀಸರು ಪ್ರಕರಣವನ್ನು ಮಹಿಳಾ ಠಾಣೆಗೆ ವರ್ಗಾಯಿಸಿದ್ದು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಲಯವು ಆರೋಪಿಗೆ ನ್ಯಾಯಂಗಬಂಧನ ವಿಧಿಸಿದೆ.