×
Ad

ಡೆಲ್ಲಿ ಡೇರ್ ಡೆವಿಲ್ಸ್‌ಗೆ ದ್ರಾವಿಡ್ ಕೋಚ್?

Update: 2016-02-22 23:58 IST

ಹೊಸದಿಲ್ಲಿ, ಫೆ.22: ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮುಂಬರುವ ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ನ ಕೋಚ್ ಇಲ್ಲವೇ ಸಲಹಾಗಾರರಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.

ಕಳೆದ ವರ್ಷ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕೋಚ್ ಆಗಿದ್ದ ದ್ರಾವಿಡ್ ಈ ವರ್ಷ ಗ್ಯಾರಿ ಕರ್ಸ್ಟನ್‌ರಿಂದ ತೆರವಾಗಿದ್ದ ಡೆಲ್ಲಿ ತಂಡದ ಕೋಚ್ ಹಾಗೂ ಸಲಹೆಗಾರ ಹುದ್ದೆ ತುಂಬುವ ನಿರೀಕ್ಷೆಯಿದೆ.

ಪ್ರಸ್ತುತ ಭಾರತ ಎ ಹಾಗೂ ಅಂಡರ್-19 ತಂಡಗಳಿಗೆ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ದ್ರಾವಿಡ್ ಐಪಿಎಲ್‌ನಲ್ಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಡೆಲ್ಲಿ ತಂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದ್ರಾವಿಡ್ ನಾಯಕತ್ವದಲ್ಲಿ ರಾಜಸ್ಥಾನ ತಂಡ ಎರಡು ಬಾರಿ ಸೆಮಿ ಫೈನಲ್‌ಗೆ ತಲುಪಿತ್ತು. 2013ರಲ್ಲಿ ಚಾಂಪಿಯನ್ಸ್ ಲೀಗ್‌ನಲ್ಲಿ ಫೈನಲ್‌ಗೆ ತಲುಪಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News