ಬಂಟ್ವಾಳ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
Update: 2016-02-23 12:10 IST
ಬಂಟ್ವಾಳ: ತಾಲೂಕಿನ ಮೂರ್ಜೆ ಬಳಿಯ ದೈಕಿನಕಟ್ಟೆ ಎಂಬಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವಿಕ್ಟರ್ ಡಿಸೋಜ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಲಾಗಿದೆ.
ಬಿಜೆಪಿ ಜಿಪಂ ಅಭ್ಯರ್ಥಿ ತುಂಗಪ್ಪ ಬಂಗೇರ ವಿಜಯದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ವಿಕ್ಟರ್ ಡಿಸೋಜರ ಮೇಲೆ ಹಲ್ಲೆ ನಡೆಸಿದ್ದು, ಪೂರ್ವ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗಿದೆ.