ಉಳ್ಳಾಲ : ಒರ್ವ ವಿದ್ಯಾರ್ಥಿಗೆ ವಿದ್ಯೆ ಜೊತೆಗೆ ಕ್ರೀಡಾಕೂಟಗಳು ಅತ್ಯಗತ್ಯ - ವಿಶಾಲ್ ಹೆಗ್ಡೆ

Update: 2016-02-23 15:21 GMT

ಉಳ್ಳಾಲ, ಫೆ. 23: ಒರ್ವ ವಿದ್ಯಾರ್ಥಿಗೆ ವಿದ್ಯೆ ಜೊತೆಗೆ ಇಂತಹ ಕ್ರೀಡಾಕೂಟಗಳು ಅತ್ಯಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಸಹ ಕುಲಾಪತಿ ವಿಶಾಲ್ ಹೆಗ್ಡೆ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಕ್ಷೇಮ ಆಡಿಟೋರಿಯಂನಲ್ಲಿ ನಿಟ್ಟೆ ವಿಶ್ವದ್ಯಾನಿಲಯ ಮತ್ತು ನಿಟ್ಟೆ ಎಜ್ಯಕೇಶನ್ ಟ್ರಸ್ಟ್‌ಗೆ ಒಳಪಟ್ಟ ಅೀನ ಕಾಲೇಜುಗಳ ‘4ನೇ ನಿಟ್ಟೆ ಕ್ರೀಡೋತ್ಸವ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯೊಂದಿಗೆ ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡಾಕೂಟಗಳು ಸಹಕಾರಿ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಒತ್ತಡದಲ್ಲಿರುವುದು ಸಹಜ ಆದರೆ ಕ್ರೀಡಾಕೂಟಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಎಲ್ಲರು ಒಟ್ಟಿಗೆ ಸೇರಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲು ಸಹಕಾರಿಯಾಗುತ್ತದೆ. ನಿಟ್ಟೆ ಕ್ರೀಡೋತ್ಸವಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎಂ.ಎಸ್. ಮೂಡಿತ್ತಾಯ ವಹಿಸಿದ್ದರು.
  ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ. ಸತೀಶ್ ಭಂಡಾರಿ, ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ. ಯು.ಎಸ್. ಕೃಷ್ಣ ನಾಯಕ್, ನಿಟ್ಟೆ ಇನ್‌ಸ್ಟಿಇಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಾತಿಮಾ ಡಿ’ಸಿಲ್ವಾ, ಕ್ಷೇಮದ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ, ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್‌ನ ನಿರ್ದೇಶಕ ಅನಿರ್ಬನ್, ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ಕ್ರೀಡಾ ಸಲಹೆಗಾರರಾದ ರಾಜಶೇಖರ್, ಅರವಿಂದ ಹೆಗ್ಡೆ, ನಿಟ್ಟೆ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಜಯಶೀಲ ಶೆಟ್ಟಿ , ರಾಜಾರಾಮ್ ಶೆಟ್ಟಿ, ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.
 ನಿಟ್ಟೆ ಗುಲಾಬಿ ಶೆಟ್ಟಿ ಸ್ಮಾರಕ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ಪ್ರಾಂಶುಪಾಲರಾದ ಡಾ ಸಿ.ಎಸ್. ಶಾಸ್ತ್ರಿ ಸ್ವಾಗತಿಸಿದರು. ನಿಟ್ಟೆ ವಿಶ್ವವಿದ್ಯಾನಿಯದ ಕ್ರೀಡಾ ಸಲಹೆಗಾರರದ ಡಾ ಮುರಳೀಕೃಷ್ಣ ವಿ. ವಂದಿಸಿದರು. ವಿದ್ಯಾರ್ಥಿನಿ ಸೋನಾಲ್ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News