ಕನ್ನೈಯ ಕುಮಾರ್‌ ಜಾಮೀನು ಅರ್ಜಿ ಫೆ.29ಕ್ಕೆ ಮಂದೂಡಿಕೆ

Update: 2016-02-24 06:12 GMT

ಹೊಸದಿಲ್ಲಿ , ಫೆ.24:ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾಗಿರುವ  ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ವಿದ್ಯಾರ್ಥಿ ಸಂಘದ ನಾಯಕ ಕನ್ನೈಯ ಕುಮಾರ್‌ ಅವರು ಬಿಡುಗಡೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್‌ ಫೆ,29ಕ್ಕೆ ಮುಂದೂಡಿದೆ.
ಕನ್ನೈಯ ಕುಮಾರ್‌ ಅವರನ್ನು ಬಂಧಿಸಿ ಪಟಿಯಾಲ ಹೌಸ್‌ ಕೋರ್ಟ್‌ಗೆ ಹಾಜರುಪಡಿಸಿದಾಗ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ ಕನ್ನೈಯ ಕುಮಾರ‍್ ಪರ ವಕೀಲರು ಸುಪ್ರೀಂ ಕೋರ್ಟ್‌‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಲು ನಿರಾಕರಿಸಿದ ಸುಪ್ರೀಕೋರ್ಟ್‌ ಜಾಮೀನು ಅರ್ಜಿಯನ್ನು ದಿಲ್ಲಿ ಹೈಕೊರ್ಟ್‌‌ಗೆ ಸಲ್ಲಿಸುವಂತೆ ಆದೇಶ ನೀಡಿತ್ತು. ಈ ಪ್ರಕರಣವನ್ನು ಹೈಕೋರ್ಟ್‌‌ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News