ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ರೋಹಿತ್ ಆತ್ಮಹತ್ಯೆ ಪ್ರಕರಣ

Update: 2016-02-24 07:09 GMT

ಹೊಸದಿಲ್ಲಿ, ಫೆ.24: ಸಂಶೋಧನ ವಿದ್ಯಾರ್ಥಿ ರೋಹಿತ್‌ ವೇಮುಲಾ ಆತ್ಮಹತ್ಯೆ ಪ್ರಕರಣ ರಾಜ್ಯಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಪ್ರತಿಪಕ್ಷಗಳ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಗದ್ದಲ ಉಂಟಾಗಿ ಕಲಾಪವನ್ನು ಎರಡು ಬಾರಿ ಮಂದೂಡಲಾಯಿತು.
ರೋಹಿತ್ ನ ಆತ್ಮಹತ್ಯೆಗೆ ಹೊರಗಿನವರು ಪ್ರಚೋದನೆ ನೀಡಿದ್ದಾರೆ. ಅಂತವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ವಿಪಕ್ಷ ಸದಸ್ಯರು ಬಿಜೆಪಿ ಮತ್ತು ಆರ್‌ಎಸ್‌ ಎಸ್‌ ವಿರುದ್ಧ ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸದನದಲ್ಲಿ ರೋಹಿತ್‌ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿದರು. ವಿಪಕ್ಷ ಸದಸ್ಯರ ವರ್ತನೆಯಿಂದ ಗರಂ ಆದ ಉಪಸಭಾಪತಿ ಪಿ.ಜೆ. ಕುರಿಯನ್ ಕಲಾಪವನ್ನು ಎರಡು ಬಾರಿ ಮುಂದೂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News