ಬಬ್ಬುಕಟ್ಟೆಯಲ್ಲಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ
Update: 2016-02-25 11:11 IST
ಮಂಗಳೂರು, ಫೆ.25: ಸ್ವಿಫ್ಟ್ ಕಾರೊಂದು ವೀಗೋ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾಪಿಕಾಡು ನಿವಾಸಿ ರಾಬಿನ್ ಗಾಯಾಳು ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುತ್ತಾರು ಕಡೆಯಿಂದ ತೊಕ್ಕೊಟ್ಟಿನತ್ತ ಅತೀವೇಗದಲ್ಲಿ ಸಂಚರಿಸುತ್ತಿದ್ದ ಕಾರು ಓವರ್‌ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.