×
Ad

ಉಡುಪಿ: ಎನ್‌ಪಿಎಸ್ ರದ್ದುಗೊಳಿಸಲು ಆಗ್ರಹಿಸಿ ಧರಣಿ

Update: 2016-02-26 23:57 IST

ಉಡುಪಿ, ಫೆ.26: ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ವತಿಯಿಂದ ‘ನಿಶ್ಚಿತ ಪಿಂಚಣಿ ನಮ್ಮ ಹಕ್ಕು ದಿನ’ದ ಅಂಗವಾಗಿ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಸಾಂಕೇತಿಕ ಧರಣಿಯನ್ನು ಇಂದು ನಡೆಸ ಲಾಯಿತು.

ಈ ಯೋಜನೆಯನ್ವಯ ಸರಕಾರಿ ನೌಕರರ ತಿಂಗಳ ವೇತನದಲ್ಲಿ ಶೇ.10 ಕಡಿತಗೊಳಿಸಿ ಅದನ್ನು ಷೇರುಮಾರುಕಟ್ಟೆಯಲ್ಲಿ ತೊಡಗಿಸುತ್ತಿದ್ದು, 30-35 ವರ್ಷಗಳ ನಂತರ ಅದರಿಂದ ಬಂದ ಲಾಭದಲ್ಲಿ ಈ ಹಣವನ್ನು ಉಪಯೋಗಿಸಿದ ಕಂಪೆನಿಗಳು ನೌಕರರಿಗೆ ಪಿಂಚಣಿ ರೂಪದಲ್ಲಿ ನೀಡುತ್ತವೆ.


ಯಾವುದೇ ಕಾನೂನುಗಳನ್ನು ರಚಿಸದೆ, ಭದ್ರತೆಯನ್ನೂ ನೀಡದೆ ಹೊಸ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ನು ರದ್ದು ಗೊಳಿಸುವಂತೆ ಒತ್ತಾಯಿಸಿ ಮನವಿಯನ್ನು ಜಿಲ್ಲಾಧಿ ಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಧರಣಿಯಲ್ಲಿ ಉಡುಪಿ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ರಾಘವ ಶೆಟ್ಟಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಪ್ರಶಾಂತ ಶೆಟ್ಟಿ, ರವಿ ಎಸ್. ಪೂಜಾರಿ, ಚಂದ್ರಮೊಗೇರ, ಜೇಮ್ಸ್ ಡಿಸಿಲ್ವ, ಹರೀಶ್ ಪೂಜಾರಿ ಹಾಗೂ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು, ಕುಂದಾಪುರ, ಉಡುಪಿ ತಾಲೂಕು ಎನ್‌ಪಿಎಸ್ ಘಟಕದ ಅಧ್ಯಕ್ಷರು, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
 

ತಾಲೂಕು ಘಟಕ: ಉಡುಪಿ ತಾಲೂಕು ಘಟಕದ ವತಿಯಿಂದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ಉಡುಪಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸುಬ್ರಹ್ಮಣ್ಯ ಶೇರಿಗಾರ್, ರಾಜ್ಯಪರಿಷತ್ ಸದಸ್ಯ ಕಿರಣ್ ಹೆಗ್ಡೆ, ಜಿಲ್ಲಾ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ರಾಘವ ಶೆಟ್ಟಿ, ಸಂಚಾಲಕ ರವಿ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News