ಎಸ್‌ಎಸ್ ಕಂಫರ್ಟ್ ಮತ್ತು ಪ್ರಕಾಶ್ ಎಲೆಕ್ಟ್ರಾನಿಕ್ಸ್ ಶುಭಾರಂಭ
ಬೆಳ್ತಂಗಡಿ : ಗ್ರಾಹಕರಿಗೆ ಬೇಕಾದ ಗುಣಮಟ್ಟದ ವಸ್ತುಗಳನ್ನು ಪೂರೈಸಿ ಅವರ ವಿಶ್ವಾಸವನ್ನು ಗಳಿಸಬೇಕು, ಗುಣಮಟ್ಟದಲ್ಲಿ ರಾಜಿಯಾಗದೆ ಆಧುನಿಕ ವ್ಯವಸ್ಥೆಗೆ ಅನುಗುಣವಾದ ಗೃಹಪಯೋಗಿ ಮತ್ತು ಫರ್ನಿಚರ್ ವಸ್ತುಗಳನ್ನು ಗ್ರಾಹಕರಿಗೆ ನೀಡಿ ವ್ಯವಹಾರ ವೃದ್ಧಿಗೊಳಿಸಿಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದ್ದಾರೆ.
‘ಅವರು ಶನಿವಾರ ಬೆಳ್ತಂಗಡಿ ಗುರುವಾಯನಕೆರೆ ಮುಖ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಸ್‌ಎಸ್ ಕಂಪರ್ಟ್ ವಾಣಿಜ್ಯ ಸಂಕೀರ್ಣ ಹಾಗೂ ಪ್ರಕಾಶ್ ಎಲೆಕ್ಟ್ರಾನಿಕ್ಸ್’ಗೃಹಪಯೋಗಿ ಎಲೆಕ್ಟ್ರಾನಿಕ್ಸ್ ಮಳಿಗೆ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು.
ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮುಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ, ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಪ್ರತಾಪಸಿಂಹ ನಾಯಕ್ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬಿ ರಾಘವ ಶೆಟ್ಟಿ. ಇಂದಿರಾ ಆರ್ ಶೆಟ್ಟಿ, ಕೆ. ರಘು ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಮಾಲಕರುಗಳಾದ ಪುಷ್ಪರಾಜ್ ಶೆಟ್ಟಿ, ಸುಮನಾ ಪಿ. ಶೆಟ್ಟಿ ಅತಿಥಿಗಳನ್ನು ಸತ್ಕರಿಸಿದರು.