×
Ad

ಉಪ್ಪಿನಂಗಡಿ: ಹಳೇ ಬಸ್ ನಿಲ್ದಾಣದ ಬಳಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಮರಮಟ್ಟುಗಳು ಬೆಂಕಿಗಾಹುತಿ

Update: 2016-02-27 22:41 IST

ಉಪ್ಪಿನಂಗಡಿ: ಇಲ್ಲಿನ ಹಳೇ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಅಧೀನದ ಮುಕ್ತಿಧಾಮದ ಬಳಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಮರಮಟ್ಟುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

    ಯಥೇಚ್ಚ ಗಿಡಮರಗಳು ಬೆಳೆದಿದ್ದ ಈ ಪ್ರದೇಶದಲ್ಲಿ ಬೆಂಕಿ ಕಾಣೀಸಿಕೊಂಡು ನೆಲಕ್ಕುರುಳಿದ್ದ ಮರಗಳು ಮೊದಲು ಬೆಂಕಿಗಾಹುತಿಯಾದರೆ ಬಳಿಕ ಇತರ ಮರಗಳಿಗೂ ಬೆಂಕಿ ಹಬ್ಬಿತು. ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿಯನ್ನು ನಿಯಂತ್ರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News