×
Ad

ಕಸಾಪ ಚುನಾವಣೆ: ಶೇ. 17.54 ಮತದಾನ

Update: 2016-02-28 20:21 IST

 ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಶೇಕಡಾ 17.54 ಮತದಾನವಾಗಿದೆ.

ಒಟ್ಟು 3,326 ಮತದಾರರ (2,619 ಪುರುಷರು, 707 ಮಹಿಳೆಯರು) ಪೈಕಿ 479 ಗಂಡಸರು ಮತ್ತು 108 ಮಂದಿ ಮಹಿಳೆಯರು ಸೇರಿ ಒಟ್ಟು 587 ಮತದಾರರು ಮತ ಚಲಾಯಿಸಿದ್ದಾರೆ. ಒಟ್ಟು 14 ಅಭ್ಯರ್ಥಿಗಳು ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಜಿಲ್ಲೆಯ 8 ಮತಗಟ್ಟೆಗಳಲ್ಲಿ ಮತದಾನ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ಚುನಾವಣಾಧಿಕಾರಿ, ಮಂಗಳೂರು ತಹಶೀಲ್ದಾರ್ ಶಿವಶಂಕರಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News