×
Ad

ಬ್ಯಾಂಕ್ಸ್ ಬೋರ್ಡ್ ಬ್ಯೂರೋಗೆ ವಿನೋದ್ ರಾಯ್ ಅಧ್ಯಕ್ಷ

Update: 2016-02-28 23:56 IST

ಹೊಸದಿಲ್ಲಿ,ಫೆ.28: ಕೆಟ್ಟ ಸಾಲಗಳು ಸೃಷ್ಟಿಸಿರುವ ಬಿಕ್ಕಟ್ಟನ್ನು ಎದುರಿಸಲು ಬ್ಯಾಂಕ್ಸ್ ಬೋರ್ಡ್ ಬ್ಯೂರೋ(ಬಿಬಿಬಿ)ದ ರಚನೆಗೆ ಪ್ರಧಾನಿ ನರೇಂದ್ರ ಮೋದಿಯವರು ಹಸಿರು ನಿಶಾನೆ ತೋರಿಸಿದ್ದಾರೆ. ಮಾಜಿ ಸಿಎಜಿ ವಿನೋದ್ ರಾಯ್ ಅವರು ಬಿಬಿಬಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಬ್ಯಾಂಕ್ ಆಫ್ ಬರೋಡಾದ ಮಾಜಿ ಮುಖ್ಯಸ್ಥ ಅನಿಲ ಖಂಡೇಲವಾಲ್,ಐಸಿಐಸಿಐ ಬ್ಯಾಂಕಿನ ಮಾಜಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಚ್.ಎನ್.ಸಿನಾರ್ ಮತ್ತು ಕ್ರಿಸಿಲ್‌ನ ಮಾಜಿ ಮುಖ್ಯಸ್ಥೆ ರೂಪಾ ಕುಡ್ವಾ ಅವರು ಸದಸ್ಯರಾಗಿರುತ್ತಾರೆ. ಬಿಬಿಬಿ ಬ್ಯಾಂಕುಗಳ ಕಾರ್ಯ ನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಕಡಿಮೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಬಿಬಿಬಿಯು ಸರಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ನಿರ್ದೇಶಕರ ನೇಮಕಾತಿಗೆ ಶಿಫಾರಸು ಮಾಡುವ ಜೊತೆಗೆ ಸಂಪನ್ಮೂಲಗಳ ಕ್ರೋಡೀಕರಣ ಮತ್ತು ಒತ್ತಡದಲ್ಲಿರುವ ಆಸ್ತಿಗಳ ವಿಷಯಗಳ ನಿರ್ವಹಣೆಯ ಬಗ್ಗೆ ಸಲಹೆಗಳನ್ನು ನೀಡಲಿದೆ. ಅದು ಬ್ಯಾಂಕ್ ಹೋಲ್ಡಿಂಗ್ ಕಂಪೆನಿಯೂ ಆಗಿ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳಲ್ಲಿನ ಎಲ್ಲ ಸರಕಾರಿ ಹೂಡಿಕೆಗಳನ್ನು ತನ್ನ ನಿಯಂತ್ರಣದಲ್ಲಿ ಹೊಂದಿರುತ್ತದೆ ಎಂದು ಮೂಲಗಳು ತಿಳಿಸಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News