×
Ad

ನಾಳೆ ಉಪವಾಸ ಸತ್ಯಾಗ್ರಹ

Update: 2016-02-29 23:52 IST

ಬ್ರಹ್ಮಾವರ, ಫೆ.29: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘವು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.2ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಸಮ್ಮುಖದಲ್ಲಿ ಸತ್ಯಾಗ್ರಹ ನಡೆಯಲಿದೆ. ಎರಡು ವರ್ಷಗಳಿಂದ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದೆ. ಆದರೆ ರಾಜ್ಯ ಸರಕಾರ ಈ ಬೇಡಿಕೆಗಳನ್ನು ಈಡೇರಿಸಿಲ್ಲ. ಅವುಗಳ ಈಡೇರಿಕೆಗಾಗಿ ನಡೆಯಲಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ಸಂಘದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News