×
Ad

ಟ್ವೆಂಟಿ-20 ವಿಶ್ವಕಪ್‌ಗೆ ವಾಪಸಾಗಲು ಸ್ಟೇಯ್ನೆ, ಟೇಲರ್ ಸಿದ್ಧ

Update: 2016-03-01 23:43 IST

ಕೇಪ್‌ಟೌನ್, ಮಾ.1: ಐಪಿಎಲ್‌ನಲ್ಲಿ ಬಹಳಷ್ಟು ಪಂದ್ಯಗಳನ್ನು ಆಡಿರುವ ವಿಶ್ವದ ಇಬ್ಬರು ಸ್ಟಾರ್ ಆಟಗಾರರಾದ ದಕ್ಷಿಣ ಆಫ್ರಿಕದ ಡೇಲ್ ಸ್ಟೇಯ್ನಿ ಹಾಗೂ ನ್ಯೂಝಿಲೆಂಡ್‌ನ ರಾಸ್ ಟೇಲರ್ ದೀರ್ಘಕಾಲದ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ತಮ್ಮ ತಂಡಕ್ಕೆ ವಾಪಸಾಗಲು ಸಜ್ಜಾಗಿದ್ದಾರೆ.

ಸ್ಟೇಯ್ನ ಹಾಗೂ ಟೇಲರ್ ಐಪಿಎಲ್‌ನಲ್ಲಿ ಸಾಕಷ್ಟು ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಭುಜ ನೋವಿನಿಂದಾಗಿ ಸುಮಾರು ಎರಡು ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಆಫ್ರಿಕದ ವೇಗ ಬೌಲರ್ ಸ್ಟೇಯ್ನಿ ಕಳೆದ ವಾರ ಸಕ್ರಿಯ ಕ್ರಿಕೆಟ್‌ಗೆ ವಾಪಸಾಗಿದ್ದರು.

ಒಂದು ತಿಂಗಳಿಂದ ಕ್ರಿಕೆಟ್‌ನಿಂದ ದೂರ ಸರಿದಿದ್ದ ಟೇಲರ್ ರವಿವಾರ ದೇಶೀಯ ಕ್ರಿಕೆಟ್‌ನಲ್ಲಿ ಆಡಿದ್ದಾರೆ. ಮಾ.15 ರಂದು ಭಾರತ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿರುವ ನ್ಯೂಝಿಲೆಂಡ್ ತಂಡಕ್ಕೆ ವಾಪಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಲಬ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಿ ಮರಳಿದ್ದ ಸ್ಟೇಯ್ನಿ 2 ಇನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭುಜನೋವಿಗೆ ತುತ್ತಾಗಿದ್ದ ಸ್ಟೇಯ್ನಾ ಆ ಬಳಿಕ ಆರು ಟೆಸ್ಟ್ ಪಂದ್ಯಗಳಿಂದ ವಂಚಿತರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News