×
Ad

ನಾಳೆ ಕನ್ನಡ ಚಲನಚಿತ್ರ ಕ್ಷೇತ್ರದ ಸಾಧಕರಿಗೆ ಸನ್ಮಾನ

Update: 2016-03-01 23:54 IST

ಬೆಂಗಳೂರು, ಮಾ.1: ಕರ್ನಾಟಕ ಚಲನಚಿತ್ರ ಅಕಾಡಮಿ ವತಿಯಿಂದ ವಾಕ್ಚಿತ್ರ ಹುಟ್ಟುಹಬ್ಬದ ಅಂಗವಾಗಿ ಮಾ.3ರಂದು ಕನ್ನಡ ಚಲನಚಿತ್ರದ ಸಿಂಹಾವಲೋಕನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ವಾರ್ತಾ ಸಚಿವ ರೋಷನ್ ಬೇಗ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಸತಿ ಸಚಿವ ಡಾ.ಎಂ.ಎಚ್.ಅಂಬರೀಷ್ ಸಾಧಕರಿಗೆ ಸನ್ಮಾನವನ್ನು ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ವಹಿಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ಅಕಾಡಮಿಯ ರಿಜಿಸ್ಟ್ರಾರ್ ಎಚ್. ಬಿ.ದಿನೇಶ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಕನ್ನಡ ಚಿತ್ರರಂಗದ ಬೆಳವಣಿಗೆ ಕುರಿತು ಉಪನ್ಯಾಸ ನೀಡಲಿದ್ದು, ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಎಸ್. ವಿ.ರಾಜೇಂದ್ರಸಿಂಗ್ ಬಾಬು ಪ್ರಸ್ತಾವಿಕ ನುಡಿಗಳ ನ್ನಾಡಲಿದ್ದಾರೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಎಸ್.ಚನ್ನಪ್ಪಗೌಡ, ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News