ಈಶ್ವರಪ್ಪರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಲು ಆಗ್ರಹ
Update: 2016-03-01 20:14 IST
ಬೆಂಗಳೂರು, ಮಾ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ಗೆ ಸಂಬಂಧಿಸಿದಂತೆ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ವಿರೋಧಿಸಿದ್ದರಿಂದ ಕೆ.ಎಸ್.ಈಶ್ವರಪ್ಪ ಆಡಳಿತ ಪಕ್ಷದವರು ಸದನಕ್ಕೆ ಕುಡಿದು ಬಂದಿದ್ದಾರೆ ಎಂದು ನುಡಿದರು.
ಈ ಮಾತಿಗೆ ತಿರುಗೇಟು ನೀಡಿದ ಆಡಳಿತ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆ.ಎಸ್.ಈಶ್ವರಪ್ಪ ಅವರು ಅನುಭವಿಗಳು, ಉಪಮುಖ್ಯಮಂತ್ರಿಯಾಗಿ, ಈಗ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಅಸಂಬದ್ಧ ಮಾತುಗಳನ್ನು ಆಡಬಾರದು ಎಂದರು.
ಅಲ್ಲದೆ, ಕಾಂಗ್ರೆಸ್ ಸದಸ್ಯ ಆರ್.ವಿ.ವೆಂಕಟೇಶ್ ಎದ್ದು ನಿಂತು ಕೆ.ಎಸ್.ಈಶ್ವರಪ್ಪ ಅವರನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ ಎನ್ನುವ ಮೂಲಕ ಮತ್ತಷ್ಟು ಸದನದ ಗದ್ದಲಕ್ಕೆ ಕಾರಣರಾದರು. ಆಗ ವಿರೋಧ ಪಕ್ಷಗಳ ಸದಸ್ಯರು ವಾಚ್ ಸಂಬಂಧ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.