ಹಾನಗಲ್ ಘರ್ಷಣೆ; 24 ಮಂದಿಗೆ ಗಾಯ, 26 ಬಂಧನ

Update: 2016-03-02 07:56 GMT

ಹಾನಗಲ್‌, ಮಾ.2.ಹಾವೇರಿ ಜಿಲ್ಲೆಯ ಹಾನಗಲ್‌ ಪಟ್ಟಣದಲ್ಲಿ ಸೋಮವಾರ ರಾತ್ರಿ ಶಿವಾಜಿ ಜಯಂತಿ ಆಚರಣೆಗೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ಸಂಭವಿಸಿದ  ಘರ್ಷಣೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ 26 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿಮಾಡಿದೆ.

ಸೋಮವಾರ ಸಂಜೆ  ಎರಡು ಸಮುದಾಯಗಳ ಧುರೀಣರ ನಡುವೆ ಶಿವಾಜಿ ಜಯಂತಿ ಆಚರಣೆಯ ಅಂಗವಾಗಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿ ವಾಗ್ವಾದ ನಡೆದಿದೆ. ಈ ವಿವಾದ ಕ್ರಿಕೆಟ್‌ ಮೈದಾನದಲ್ಲಿ ಪ್ರತಿಧ್ವನಿಸಿದೆ. ಘರ್ಷಣೆಯಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದೆ. ಬಳಿಕ ಹಿಂಸಾಚಾರ ಉಂಟಾಗಿ, ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.
ಪೊಲೀಸರು ಐವತ್ತಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News