ಪುತ್ತೂರು: ಪಿಡಿಒಗಳಿಗೆ ಉಪತಹಸೀಲ್ದಾರ್ ಹುದ್ದೆಗೆ ವಿರೋಧ
Update: 2016-03-02 20:13 IST
ಪುತ್ತೂರು: ಕಂದಾಯ ಇಲಾಖೆಯ ಶಿರಸ್ತೇದಾರ್/ಉಪತಹಸೀಲ್ದಾರ್ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್‌ರಾಜ್ ಇಲಾಖೆಯಿಂದ ವಿಲೀನಗೊಳಿಸುವುದನ್ನು ವಿರೋಧಿಸಿ ಪುತ್ತೂರು ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆಯ ನೌಕರರರು ಬುಧವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ವ್ಯಕ್ತ ಪಡಿಸಿದರು.
ರಾಜ್ಯ ಸಂಘದ ಕರೆಯಂತೆ ಪುತ್ತೂರಿನಲ್ಲಿ ಕಂದಾಯ ಇಲಾಖೆಯ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಎಲ್ಲಾ ನೌಕರರು ಮದ್ಯಾಹ್ನದ ವಿರಾಮದ ವೇಳೆಯಲ್ಲಿ ಮಿನಿ ವಿಧಾನ ಸೌಧದ ಮುಂಬಾಗದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಇದರ ಮುಖ್ಯಸ್ಥರಾಗಿರುತ್ತಾರೆ. ನಿತ್ಯದ ಆಡಳಿತ ನಿರ್ವಹಣೆಯಲ್ಲಿ ಕಂದಾಯ ಇಲಾಖೆಯು ಅತ್ಯಂತ ಪ್ರಾಮುಖ್ಯತೆ ಇರುವುದರಿಂದ ಈ ಇಲಾಖೆಯ ನೌಕರರಿಗೆ ಅನ್ಯಾಯವಾಗದಂತೆ ಖಾತ್ರಿ ಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.