×
Ad

ಎ.ಜೆ. ಆಸ್ಪತ್ರೆಯಲ್ಲಿ ಕ್ಯಾನ್ಸರ್ ವಿರುದ್ಧ ಜಾಗೃತಿ ಕಾರ್ಯಕ್ರಮ

Update: 2016-03-02 23:30 IST

ಮಂಗಳೂರು, ಮಾ.2: ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮತ್ತು ರೋಟರಿ ಜಿಲ್ಲೆ-3180ರ ಜಂಟಿ ಸಹಯೋಗದೊಂದಿಗೆ ಕ್ಯಾನ್ಸರ್ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪ್ರಥಮ ಕಾರ್ಯಕ್ರಮವನ್ನು ನಗರದ ಎ.ಜೆ.ಆಸ್ಪತ್ರೆಯ ಆವರಣದಲ್ಲಿಂದು ರೋಟರಿ ಜಿಲ್ಲೆ 3180ರ ಗವರ್ನರ್ ಡಾ.ಭರತೇಶ್ ಅದಿರಾಜ್ ಉದ್ಘಾಟಿ ಸಿದರು.
 

ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತ ದಲ್ಲಿ ಗುರುತಿಸಲು ಸಾಧ್ಯವಾದರೆ ಗುಣಪಡಿಸ ಬಹುದು. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಎ.ಜೆ. ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳ ಸಹಯೋಗ ದೊಂದಿಗೆ ಕ್ಯಾನ್ಸರ್ ರೋಗದ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಡಾ.ಭರತೇಶ್ ಅದಿರಾಜ್ ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಮಾತ ನಾಡಿ, ಪ್ರತಿವರ್ಷ ಸುಮಾರು ಒಂಬತ್ತು ಲಕ್ಷ ಮಂದಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಾರೆ. ಈ ಪೈಕಿ ಶೇ.4ರಿಂದ 5ರಷ್ಟು ಮಂದಿ ಸಾವನ್ನಪ್ಪುತ್ತಾರೆ. ಕಡಿಮೆ ವೆಚ್ಚದಲ್ಲಿ ಈ ರೋಗವನ್ನು ಆರಂಭಿಕ ಹಂತದಲ್ಲಿ ಗುಣಪಡಿಸಬಹದಾಗಿದೆ ಎಂದು ತಿಳಿಸಿದರು.
ಎ.ಜೆ. ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಕಮಲಾಕ್ಷ ಕೆ. ಶೆಣೈ ವೇದಿಕೆಯಲ್ಲಿ ಉಪಸ್ಥಿತ ರಿದ್ದರು. ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ ಸ್ವಾಗತಿಸಿದರು. ಡಾ.ನವೀನ್ ರೋಡ್ರಿಗಸ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News