ಬಿಎಂಟಿಸಿಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ
ಬೆಂಗಳೂರು, ಮಾ. 2: ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ 7,681 ಪ್ರಯಾಣಿಕರನ್ನು ಪತ್ತೆಹಚ್ಚಿ ಅವರಿಂದ ಒಟ್ಟು 13.69 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದ ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿ ಸಂಚರಿಸುತ್ತಿದ್ದ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಪ್ರಸ್ತುತ ಸಾಲಿನ ಜನವರಿನಲ್ಲಿ ಒಟ್ಟು 29,335 ಟ್ರಿಪ್‌ಗಳನ್ನು ತಪಾಸಣೆ ನಡೆಸಿದವು. ಇದರಲ್ಲಿ 7,681 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ ಅವರಿಂದ ಒಟ್ಟು ರೂ. 13,69,350 ರೂ. ದಂಡ ವಸೂಲಿ ಮಾಡುವ ಜೊತೆಗೆ ಸಂಸ್ಥೆಯ 3,643 ನಿರ್ವಾಹಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 1,218 ಪುರುಷ ಪ್ರಯಾಣಿಕರಿಂದ ಮೋಟಾರು ವಾಹನ ಕಾಯ್ದೆ ಅನ್ವಯ ಒಟ್ಟು 1.21 ಲಕ್ಷ ರೂ. ದಂಡ ಹಾಕಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.