ರೈತರ ಮೇಲೆ ಲಾಠಿ ಜಾರ್ಜ್ ಖಂಡಿಸಿ ಕೋಲಾರ ಬಂದ್
ಬೆಂಗಳೂರು , ಮಾ.4: ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಗುರುವಾರ ಬೆಂಗಳೂರಿಗೆ ಆಗಮಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಕ್ರಮವನ್ನು ವಿರೋಧಿಸಿ ಇಂದು ಕೋಲಾರ ಬಂದ್‌ಗೆ ಕರೆ ನೀಡಲಾಗಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ನಡೆಸುತ್ತಿದೆ. ಎಪಿಎಂಸಿ ಯಾರ್ಡ್ ಬಳಿ ಬಸ್ ಗಳ ಮೇಲೂ ರೈತರು ಕಲ್ಲು ತೂರಾಟ ಪ್ರಕರಣ ವರದಿಯಾಗಿದೆ. ರಸ್ತೆ ಮಧ್ಯೆಯೇ ಟಯರ್ ಗಳಿಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರಕ್ಕೆ ತಡೆ ಒಡ್ಡಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ವಕೀಲರು ರೈತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.ರೈತರ ಮೇಲಿನ ಪ್ರಕರಣವನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.
ರೈತರ ಹೋರಾಟಕ್ಕೆ ಗದಗ ಹಾಗೂ ನರಗುಂದ ಪ್ರದೇಶಗಳಲ್ಲಿ , ನಾಗರಿಕರು ಸ್ವಯಂ ಪ್ರೇರಿತವಾಗಿ ಅಂಗಡಿಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ.