×
Ad

ದೇರಳಕಟ್ಟೆ:ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

Update: 2016-03-04 21:20 IST

ಉಳ್ಳಾಲ: ವೈದ್ಯ ವಿದ್ಯಾರ್ಥಿಗಳ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದರೆ, ಇತರ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ದೇರಳಕಟ್ಟೆಯ ನಿತ್ಯಾನಂದನಗರ ಬಳಿ ಸಂಭವಿಸಿದೆ.

     ಕೇರಳ ಮೂಲದ ಮ್ಯಾಥ್ಯು ವರ್ಗೀಸ್ (21) ಚಿಂತಾಜನಕ ಸ್ಥಿತಿಯಲ್ಲಿದ್ದು, ಜಾಜ್‌ರ್  ರೋಹನ್ (21), ಕೌಶಿಕ್ ಥೋಮಸ್, ಸಂಶಾದ್ , ರಾಜೀವ್ ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ವಿದ್ಯಾರ್ಥಿಗಳು ದೇರಳಕಟ್ಟೆಯ ಬಾರೊಂದರಲ್ಲಿ ಊಟ ಮುಗಿಸಿ ಕುತ್ತಾರು ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರೊಳಗಿದ್ದ ಎಲ್ಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ., ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News