ಲಾಠಿ ಚಾರ್ಜ್ ಖಂಡಿಸಿ ರೈತ ಸಂಘ ಹಸಿರು ಸೇನೆ ಪ್ರತಿಭಟನೆ
Update: 2016-03-04 23:45 IST
ಪುತ್ತೂರು, ಮಾ.4: ಶಾಶ್ವತ ನೀರಾವರಿಗಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಮತ್ತು ಸರಕಾರದ ರೈತ ವಿರೋ ನೀತಿಯನ್ನು ವಿರೋಸಿ ಶುಕ್ರವಾರ ಸಂಜೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಸದಸ್ಯರು ಪ್ರತಿಭಟನೆ ನಡೆಸಿದರು. ಪುತ್ತೂರು ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ದ.ಕ. ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ರವಿಕಿರಣ್ ಪುಣಚ, ಸಂಘಟನಾ ಕಾರ್ಯದರ್ಶಿ ವಿನೋದ್ ಪಾದೆಕಲ್ಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲಿಮಾರ ರೂಪೇಶ ರೈ ಮತ್ತಿತರರು ಮಾತನಾಡಿದರು.