×
Ad

ತುಂಬೆ: ರಾಷ್ಟ್ರೀಯ ಹೆದ್ದಾರಿ ಬಳಿ ಅತಿಕ್ರಮಣ ತೆರವು

Update: 2016-03-05 14:20 IST

ಬಂಟ್ವಾಳ, ಮಾ.5: ತುಂಬೆಯಿಂದ ಮಂಗಳೂರು ಮಹಾ ನಗರ ಪಾಲಿಕೆಗೆ ನೀರು ಪೂರೈಕೆಯಾಗುವ ಪೈಪ್ ಮೇಲೆ ಅಕ್ರಮವಾಗಿ ನಿರ್ಮಿಸಿರುವ ಕಂಪೌಂಡ್ ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು. 


   ಅತಿಕ್ರಮಿಸಿರುವ ಜಾಗವನ್ನು ತೆರವುಗೊಳಿಸುವಂತೆ ಅಧಿಕಾರಿಗಳು ಈ ಹಿಂದೆಯೇ ಸಂಬಂಧಿಸಿದವರಿಗೆ ನೊಟೀಸ್ ನೀಡಿದ್ದರು. ಸ್ವಯಂ ಆಗಿ ತೆರವುಗೊಳಿಸದಿರುವುದರಿಂದ ಇಂದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.

 
   ಈ ಸಂದರ್ಭದಲ್ಲಿ ಸ್ಥಳೀಯರು ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲ ಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. 


   ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು, ತಹಶೀಲ್ದಾತರ್ ಪುರಂದರ ಹೆಗಡೆ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News