×
Ad

ಮಂಗಳೂರು : 7ರಂದು ಮನಪಾದಿಂದ ಸವಲತ್ತುಗಳ ವಿತರಣೆ

Update: 2016-03-05 16:30 IST

ಮಂಗಳೂರು, ಮಾ.6:  ಮಹಾನಗರ ಪಾಲಿಕೆ ಪಾಲಿಕೆಯ ಬಡತನ ನಿರ್ಮೂಲನಾ ಕೋಶದ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳಡಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಮಾ. 7ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್ ತಿಳಿಸಿದರು.
ಮನಪಾ ಮೇಯರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 9-30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಒಟ್ಟು 1200 ಫಲಾನುಭವಿಗಳಿಗೆ 68,30,400 ರೂ.ಗಳ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು ಎಂದರು. 
ಮಹಾನಗರ ಪಾಲಿಕೆಯ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ನೀರು ಸರಬರಾಜು, ದಾರಿದೀಪ, ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ಇತ್ಯಾದಿಗಳ ಅನುಷ್ಠಾನದ ಜತೆಗೆ ನಗರದ ಬಡಜನರ ಹಾಗೂ ದಲಿತರ ಶ್ರೇಯೋಭಿವೃದ್ದಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನಗರ ಬಡತನ ನಿರ್ಮೂಲನಾ ಕೋಶದಡಿ ಅನುಷ್ಠಾನಗೊಳಿಸುತ್ತಿರುವುದಾಗಿ ಕಾಯರ್ಕ್ರಮ ಇದಾಗಿದೆ ಎಂದು ಹೇಳಿದರು.
ಈ ಪ್ರತ್ಯೇಕ ಕೋಶದಡಿ ಶೇ. 24.10 ಯೋಜನೆ, ಶೇ. 7.25 ಯೋಜನೆ, ಶೇ. 3 ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಸ್ವಸ್ಥ ಕುಟೀರ, ಕುಟೀರ ಜ್ಯೋತಿ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಮೊದಲಾದ ಮುಖ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಜಂಟಿಯಾಗಿ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಐದು ಮಂದಿ ವಿಕಲಚೇತನರಿಗೆ 248800 ರೂ. ವೆಚ್ಚದ ಶ್ರವಣ ಸಾಧನ, 504 ಮಂದಿಗೆ 3024000 ರೂ. ಪೋಷಣಾ ಭತ್ತೆ, 25 ಮಂದಿಗೆ 160000 ರೂ.ಗಳ ವ್ಯಾಸಂಗೇತರ ಚಟುವಟಿಕೆ, 3 ವಿಕಲಚೇತನ ಸಂಸ್ಥೆಗೆ 45,000 ರೂ. ಸಹಾಯದನ, 3 ಮಂದಿಗೆ ಸ್ವ ಉದ್ಯೋಗಕ್ಕಾಗಿ 150,000ರೂ., 3,08,000 ರೂ.ಗಳಲ್ಲಿ 4 ಮಂದಿಗೆ ಹೆಚ್ಚುವರಿ ಎರಡು ಚಕ್ರಗಳುಳ್ಳ ದ್ವಿಚಕ್ರ ಸೌಲಭ್ಯ, 706 ಮಂದಿಗೆ ಶೇ. 24.10 ಮತುತ ಶೇ. 7.25 ಮೀಸಲು ನಿಧಿಯಡಿ ಅಡುಗೆ ಅನಿಲ ಸಂಪರ್ಕ ವಿತರಣೆ 28,94600 ರೂ. ವೆಚ್ಚದಲ್ಲಿ ನೀಡಲಾಗುವುದು ಎಂದು ಅವರು ವಿವರಿಸಿದರು.
ಗೋಷ್ಠಿಯಲ್ಲಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಹರಿನಾಥ್, ದೀಪಕ್ ಪೂಜಾರಿ, ಕೇಶವ ಮರೋಳಿ, ಪ್ರಕಾಶ್ ಸಾಲಿಯಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News