ಸಚಿವ ರಮಾನಾಥ ರೈ ಪ್ರವಾಸ
Update: 2016-03-05 23:33 IST
ಮಂಗಳೂರು, ಮಾ.5: ಅರಣ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾ.6ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವರು. ಬೆಳಗ್ಗೆ 9:30ಕ್ಕೆ ಬಂಟ್ವಾಳ ಕೆಳಗಿನಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುವ ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸುವರು.
10ಕ್ಕೆ ಪಿಲಿಕುಳ ಅರ್ಬನ್ ಇಕೋ ಪಾರ್ಕ್ ಸ್ಥಾಪನೆ ಕುರಿತು ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯುವ ಸಭೆಯಲ್ಲಿ ಹಾಗೂ 11ಕ್ಕೆ ನಗರದ ನೀರುಮಾರ್ಗ ಜಂಕ್ಷನ್‌ನಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಸಂಜೆ 4ಕ್ಕೆ ಮಂಗಳೂರಿನ ಟಿಎಂಎ ಪೈ ಹಾಲ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ‘ಮತ್ಸಮೇಳ’ದ ಸಮಾರೋಪ ಸಮಾರಂಭ, 5:30ಕ್ಕೆ ಪುತ್ತೂರಿನಲ್ಲಿ ನಡೆಯುವ ಕೋಟಿ-ಚೆನ್ನಯ ಜೋಡುಕರೆ ಕಂಬಳ ಹಾಗೂ 7ಕ್ಕೆ ಗುರುಪುರ ಯುವಕ ಸಂಘದ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.