×
Ad

ನಂದಾವರ: ಉರೂಸ್ ಸಮಾರೋಪ

Update: 2016-03-06 23:35 IST

ವಿಟ್ಲ, ಮಾ.6: ನಂದಾವರ ಕೇಂದ್ರ ಜುಮಾ ಮಸೀದಿಯ ಅಧೀನ ದಲ್ಲಿರುವ ಹಝ್ರತ್ ವಲಿಯುಲ್ಲಾಹಿ ದರ್ಗಾ ಶರೀಫ್‌ ಉರೂಸ್ ಸಮಾರೋಪ ಸಮಾರಂಭವು ಶನಿವಾರ ನಡೆಯಿತು.

 ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ಕಾರ್ಯಕ್ರಮ ಉದ್ಘಾಟಿಸಿದರು. ಸಮಸ್ತ ಕೇರಳ ಜಂ ಇಯ್ಯತಯಲ್ ಉಲಮಾ ಪ್ರಧಾನ ಕಾರ್ಯ ದರ್ಶಿ ಶೈಖುನಾ ಶೈಖುಲ್ ಜಾಮಿಅ ಕೆ.ಆಲಿಕುಟ್ಟಿ ಮುಸ್ಲಿಯಾರ್ ದುಆಶೀರ್ವಚನಗೈದರು. ಸಮಾರಂಭದಲ್ಲಿ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಶೈಖುನಾ ಶೈಖುಲ್ ಜಾಮಿಅ ಕೆ. ಆಲಿಕುಟ್ಟಿ ಮುಸ್ಲಿಯಾರ್‌ರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ನಡೆದ ಸೌಹಾರ್ದ ಸಮಾವೇಶವನ್ನು ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಉದ್ಘಾಟಿಸಿದರು. ದ.ಕ.ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಕೆ. ಅಶ್ರಫ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಲಹೆಗಾರ ರಫೀಕ್ ಮಾಸ್ಟರ್, ಪುರಸಭಾ ಸದಸ್ಯ ಐಎಂಆರ್ ಇಕ್ಬಾಲ್ ಗೂಡಿನಬಳಿ, ಉದ್ಯಮಿ ಗೋಪಾಲ ಆಚಾರ್ಯ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಮುಸ್ತಫಾ ಕೆಂಪಿ, ನೆಹರೂ ನಗರ ಮಸೀದಿಯ ಅಧ್ಯಕ್ಷ ಹಾಜಿ ಪಿ.ಎಸ್. ಅಬ್ದುಲ್ ಹಮೀದ್, ಬಂಟ್ವಾಳ ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಸಜಿಪ ಮುನ್ನೂರು ಗ್ರಾಪಂ ಅಧ್ಯಕ್ಷ ಮುಹಮ್ಮದ್ ಶರೀಫ್, ಗುತ್ತಿಗೆದಾರ ಜೆಟಿಟಿ ಇಕ್ಬಾಲ್, ಉದ್ಯಮಿ ಮುಹಮ್ಮದ್ ಇಲ್ಯಾಸ್ ಕುವೈಟ್ ಭಾಗವಹಿಸಿದ್ದರು.

ಕೆ.ಬಿ. ಅಬ್ದುಲ್ ಖಾದರ್ ದಾರಿಮಿ, ಮಾಹಿನ್ ದಾರಿಮಿ ಪಾತೂರು, ಹನೀಫ್ ಹಾಜಿ ಮಂಗಳೂರು, ಹಾಜಿ ಎಸ್.ಅಬ್ಬಾಸ್ ಸಜಿಪ, ಬಂಟ್ವಾಳ ಜುಮಾ ಮಸೀದಿಯ ಮುದರ್ರಿಸ್ ಅನ್ಸಾರ್ ಫೈಝಿ, ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ, ಟ್ಯಾಲೆಂಟ್‌ನ ಹಮೀದ್ ಕಣ್ಣೂರು, ಬಂಟ್ವಾಳ ಮಸೀದಿಯ ಅಧ್ಯಕ್ಷ ಇಸ್ಮಾಯೀಲ್ ಅರಬಿ, ಅಬ್ದುಲ್ ಮಜೀದ್ ಫೈಝಿ ನಂದಾವರ, ನಂದಾವರ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಮಜೀದ್, ಪ್ರ.ಕಾರ್ಯದರ್ಶಿ ಹಂಝ ನಂದಾವರ, ಪದಾಧಿಕಾರಿಗಳಾದ ಶಾಹುಲ್ ಹಮೀದ್, ಉಸ್ಮಾನ್ ನಂದಾವರ, ರಿಯಾಝ್, ಹಕೀಂ ನಂದಾವರ, ಅಬ್ಬೋನು ನಂದಾವರ ಉಪಸ್ಥಿತರಿದ್ದರು.

ನಂದಾವರ ಮಸೀದಿಯ ಖತೀಬ್ ಎನ್.ಎಚ್.ಆದಂ ಫೈಝಿ ಸ್ವಾಗತಿಸಿ, ವಂದಿಸಿದರು. ನೌಫಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News