ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರಿಗೆ ಮುಸ್ಲಿಮರಿಂದ ಪಾನಕ
Update: 2016-03-07 13:48 IST
ಬೆಳ್ತಂಗಡಿ, ಮಾ.7: ಮಹಾಶಿವರಾತ್ರಿಯ ಪ್ರಯುಕ್ತ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರಿಗೆ ಧರ್ಮಸ್ಥಳ ಸಮೀಪದ ಅಜುಕುರಿ ಎಂಬಲ್ಲಿ ಮುಸ್ಲಿಮ್ ಯುವಕರು ಪಾನೀಯದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಇಂದು ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರಿಗಳಾಗಿ ಆಗಮಿಸುತ್ತಿದ್ದಾರೆ. ಬಿಸಿಲ ಬೇಗೆಯಿಂದ ಬಳಲಿರುವ ಈ ಭಕ್ತರಿಗೆ ಅಜುಕುರಿಯಲ್ಲಿ ಸ್ಥಳೀಯ ಮುಸ್ಲಿಮ್ ಯುವಕರು ಅಲ್ಲಲ್ಲಿ ಪಾನೀಯದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇದು ಯಾತ್ರಿಕರ ಆಯಾಸ ಪರಿಹರಿಸುವಲ್ಲಿ ಸಹಕಾರಿಯಾಗಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.