ಪುತ್ತೂರು: ನಗರಸಭೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ನೇಮಕ
Update: 2016-03-07 20:14 IST
ಪುತ್ತೂರು: ಪುತ್ತೂರು ನಗರ ಸಭೆಯ ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರವಧಿ ಮಾ. 10 ರಂದು ಕೊನೆಗೊಳ್ಳಲಿದ್ದು, ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ತನಕ ದ.ಕ. ಜಿಲ್ಲಾಧಿಕಾರಿಗಳನ್ನು ನಗರಸಭೆಯ ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಮಾ. 10 ರಂದು ನಗರ ಸಭೆಯ ಅಧಿಕಾರ ಸ್ವೀಕರಿಸಲಿದ್ದಾರೆ.