ಪಶ್ಚಿಮ ಸಿಡ್ನಿಯಲ್ಲಿ ಗುಂಡಿನ ದಾಳಿ: ಒಬ್ಬ ಸಾವು, ಇಬ್ಬರಿಗೆ ಗಾಯ
Update: 2016-03-07 23:04 IST
ಸಿಡ್ನಿ, ಮಾ.7: ಪಶ್ಚಿಮ ಸಿಡ್ನಿಯಲ್ಲಿ ನಡೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು, ಇತರ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ದಾಳಿಯಿಂದ ಮೂವರು ಗಾಯಗೊಂಡ ವರದಿಗಳ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದಾಗ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವುದು ಕಂಡುಬಂತು. ಇತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಬಗ್ಗೆ ಮಾಹಿತಿ ಇಲ್ಲ ಎಂದು ನ್ಯೂ ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ.