ಪರಸ್ಪರ ಹೊಡೆದಾಟ: ಬಸ್ ಚಾಲಕ, ನಿರ್ವಾಹಕರ ಸೆರೆ
ಕೋಟ, ಮಾ.7: ಕೋಟ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ 7:30ರ ಸುಮಾರಿಗೆ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದ ಬಸ್ ಚಾಲಕ ಹಾಗೂ ನಿರ್ವಾಹಕರಾದ ನಾಲ್ವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದುರ್ಗಾಂಬಾ ಬಸ್‌ನ ಚಾಲಕ ನರಸಿಂಹ ಮೂರ್ತಿ, ನಿರ್ವಾಹಕ ಶಿವಕುಮಾರ್ ಮತ್ತು ರಾಕೇಶ್ ಬಸ್‌ನ ಚಾಲಕ ರಾಘವೇಂದ್ರ ಪೂಜಾರಿ, ನಿರ್ವಾಹಕ ಮುಹಮ್ಮದ್ ಜಾವೇದ್ ಅಕ್ರಮ್ ಎಂದು ಗುರುತಿಸಲಾಗಿದೆ. ಇವರು ಎರಡು ಬಸ್‌ಗಳನ್ನು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ನಿಲ್ಲಿಸಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದು ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಕೋಟ ಪೊಲೀಸರು ಆರೋಪಿಗಳನ್ನು ಬಂಧಿಸಿ, ಎರಡು ಬಸ್‌ಗಳನ್ನು ಹಾಗೂ ಕಬ್ಬಿಣದ ರಾಡನ್ನು ವಶಪಡಿಸಿಕೊಂಡರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.