ಗ್ರಂಥಾಲಯಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ
Update: 2016-03-08 23:23 IST
ಬೆಂಗಳೂರು, ಮಾ.8: ರಾಜಾರಾಂ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ವತಿಯಿಂದ ಸಾರ್ವಜನಿಕರಿಗೆ ಉಚಿತ ಗ್ರಂಥಾಲಯ ಸೇವೆ ಒದಗಿಸುತ್ತಿರುವ ನೋಂದಾಯಿತ ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆ ಗಳನ್ನು ಸಂಬಂಧಿಸಿದ ಉಪನಿರ್ದೇಶಕರು, ಮುಖ್ಯಗ್ರಂಥಾಲಯಾಧಿಕಾರಿ ಗಳು, ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯಗಳಲ್ಲಿ ಮಾ.26ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಜಿಲ್ಲೆಯ ಮುಖ್ಯಗ್ರಂಥಾಲಯ ಅಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಪಡೆಯಲು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು.